ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಎಲ್ಲ ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ದೇಶದ ವಿಷಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಅವರೇ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟು ಬೇಗ ಯಾರ ಮಾತು ಕೇಳಿ ನಿಲ್ಲಿಸಿದ್ದು? ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೈನಿಕರಿಗೆ ಅಭಿನಂದನೆ ಸಲ್ಲಿಸುವೆ ಎಂದರು