ಚಾಮರಾಜನಗರದ ಸೋಮವಾರಪೇಟೆ ಬಡಾವಣೆಯ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ಸುಮಾರು 15 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಬಂಕ್ ಮುಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿತ್ತು. ಸ್ಥಳೀಯರು ಹೆಬ್ಬಾವನ್ನು ನೋಡಿ ಭಯಗೊಂಡು ಉರಗಪ್ರೇಮಿ ಸ್ನೇಕ್ ಅಶೋಕ್ ಅವರಿಗೆ ಕರೆ ಮಾಡಿದರು. ಸ್ನೇಕ್ ಅಶೋಕ್ ಸ್ಥಳಕ್ಕೆ ಬಂದು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಸೋಮವಾರಪೇಟೆ ಬಡಾವಣೆಯಲ್ಲಿ ಇನ್ನೂ ಎರಡು ಹೆಬ್ಬಾವು ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯರಲ್ಲಿ ಭಯ ಉಂಟಾಗಿದೆ.