Back
Shamsheer
Dakshina Kannada575013blurImage

ಮಂಗಳೂರು ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

ShamsheerShamsheerNov 16, 2024 04:08:55
Mangaluru, Karnataka:
ಅಂಕಪಟ್ಟಿಯ ಸಮಸ್ಯೆ,ಅವೈಜ್ಞಾನಿಕವಾಗಿ ಪರೀಕ್ಷಾ ಶುಲ್ಕ ಹೆಚ್ಚಳ ಹಾಗೂ ವಿವಿಯ ಹಲವಾರು ಸಮಸ್ಯೆಗಳ ವಿರುದ್ಧ ಎಬಿವಿಪಿ ಮಂಗಳೂರು ವಿಭಾಗದ ವತಿಯಿಂದ ವಿದ್ಯಾರ್ಥಿಗಳು ಇಂದು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರದಂದು ಬೆಳಿಗ್ಗೆಯೇ ವಿವಿಯ ಕ್ಯಾಂಪಸ್ ನಲ್ಲಿ ಸೇರಿದ್ದ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಬಳಿಕ ವಿಶ್ವವಿದ್ಯಾಲಯದ ಆಡಳಿತ ಸೌಧದ ಕಡೆಗೆ ಸಾಗಿ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ
0
Report
Dakshina Kannada575005blurImage

ಕದ್ರಿ ಸ್ಮಾರಕ ಬಳಿ ಕಾರು ಧಗಧಗ

ShamsheerShamsheerNov 16, 2024 04:05:14
Mangaluru, Karnataka:
ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ. ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2.40 ಲಕ್ಷ ಕೊಟ್ಟು ಇವತ್ತಷ್ಟೆ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ.  ಅಗ್ನಿಶಾಮಕದಳ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
0
Report
Dakshina Kannada575028blurImage

ಪಿಲಿಕುಳದಲ್ಲಿ ದಿಢೀರ್ ಬೆಂಕಿ ಅವಘಡ!

ShamsheerShamsheerNov 02, 2024 04:59:01
Moodushedde, Karnataka:
ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದು ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ. ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದವು. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0
Report
Dakshina Kannada574142blurImage

ಸರ್ಕಾರಿ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಶಾಖೆ!?

ShamsheerShamsheerNov 02, 2024 04:55:11
Mangaluru, Karnataka:
ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ ಸುರತ್ಕಲ್ ಸಮೀಪದಲ್ಲಿರುವ ಮಂಗಳಪೇಟೆಯಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಶಾಖೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರಕಾರದ ಆದೇಶ ಮೀರಿ ಶಾಲಾ ಆವರಣದಲ್ಲಿ ಸಂಘದ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಶಾಲೆಯಿಂದ ಗ್ರಾಮ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದೆ.
0
Report
Dakshina Kannada574142blurImage

ಮಂಗಳೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ShamsheerShamsheerNov 02, 2024 04:52:49
Mangaluru, Karnataka:
ಹೆಚ್ಚು ಜಿಎಸ್ ಟಿ ಸಂಗ್ರಹಿಸುವ ರಾಜ್ಯ ಕರ್ನಾಟಕವಾಗಿದ್ದರೂ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಇಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿ ರಾಜ್ಯೋತ್ಸವ ಸಂದೇಶ ನೀಡಿದರು.
0
Report
Dakshina Kannada575013blurImage

ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆ!

ShamsheerShamsheerNov 02, 2024 04:51:24
Mangaluru, Karnataka:
ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಈ ಬಗ್ಗೆ ಜನಜಾಗೃತಿಯಾಗಬೇಕಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಜಾನ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿ ಭಾಷೆ ಮೇಲೆ ನಮಗೆ ಅಭಿಮಾನವಿದೆ. ಆದರೆ ಅದರ ಹೇರಿಕೆ ಸರಿಯಲ್ಲ. ಭಾಷಾವಾರು ಏಕೀಕರಣದ ವೇಳೆ ತಮಿಳುನಾಡಿನಲ್ಲಿ ತಮಿಳರು, ಆಂಧ್ರದಲ್ಲಿ ತೆಲುಗಿನವರು ಒಂದಾದರು ಎಂದರು.
0
Report
Dakshina Kannada574219blurImage

ಪೊಳಲಿ ದೇಗುಲದಲ್ಲಿ ದೇವರಿಗೆ ರಂಗಪೂಜೆ

ShamsheerShamsheerNov 02, 2024 04:50:27
Tankaulipady, Karnataka:
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಉಳಿಪ್ಪಾಡಿಗುತ್ತಿನಿಂದ ಧರ್ಮ ದೈವ ಶ್ರೀ ಕೊಡಮಣಿತ್ತಾಯನ ಭಂಡಾರ ಆಗಮಿಸಿ ಶ್ರೀ ದೇವರಿಗೆ ರಂಗಪೂಜೆ ಮತ್ತು ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ವತಿಯಿಂದ ತುಪ್ಪದ ದೀಪೋತ್ಸವ ಆಚರಣೆ ನಡೆಯಿತು.
0
Report
Dakshina Kannada575004blurImage

ಕಾಂಗ್ರೆಸ್ ಮುಖಂಡನಿಂದ ಬಿಜೆಪಿ ಶಾಸಕರಿಗೆ ಸವಾಲ್

ShamsheerShamsheerNov 02, 2024 04:49:37
Mangaluru, Karnataka:
ಜಾತಿ ಗಣತಿಯನ್ನು ಜಾರಿ ಮಾಡಬೇಕೆಂದು ಪ್ರಸ್ತಾಪವನ್ನಿಟ್ಟ ಹಿಂದುಳಿದ ವರ್ಗದ ನಾಯಕ ಬಿ.ಕೆ. ಹರಿಪ್ರಸಾದ್ ಬಗ್ಗೆ ತುಚ್ಛವಾಗಿ ಮಾತನಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಹರಿಪ್ರಸಾದ್ ಹಾಗೂ ಅವರ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜಾ ಅವರು ಬಿ.ಕೆ. ಹರಿಪ್ರಸಾದ್ ಅವರ ಡಿಎನ್ಎ ಪರೀಕ್ಷೆ ಮಾಡಬೇಕೆಂದು ಕೀಳುಮಟ್ಟದ ರಾಜಕೀಯ ಹೇಳಿಕೆ ನೀಡಿರುವುದು ಖಂಡನೀಯ ಅಂದಿದ್ದಾರೆ.
0
Report
Dakshina Kannada575013blurImage

ಮಂಗಳೂರು: ಪರಿಷತ್ ಎಲೆಕ್ಷನ್ ಮತಎಣಿಕೆ ಪ್ರಾರಂಭ

ShamsheerShamsheerOct 24, 2024 10:05:04
Mangaluru, Karnataka:
ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆಯು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಯ್ತು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡಿತಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ”  ಗ್ರೂಪ್ ಸಿಬ್ಬಂದಿ ಇದ್ದಾರೆ.
0
Report
Dakshina Kannada574201blurImage

ಸಂಘಪರಿವಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ

ShamsheerShamsheerOct 24, 2024 01:02:30
Puttur, Karnataka:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ನ‌ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭಾಗಿಯಾಗಿ ಅಚ್ವರಿ ಮೂಡಿಸಿದ್ರು. ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು.
0
Report
Dakshina Kannada574220blurImage

ಬಿಜೆಪಿ ಮುಖಂಡನಿಗೆ ಸಂಘಪರಿವಾರದ ನಾಯಕರಿಂದ ತಡೆ

ShamsheerShamsheerOct 24, 2024 01:01:37
Puttur, Karnataka:
ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಆಕ್ಷೇಪಿಸಿ ತಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರಿನ ಬ್ಯಾಂಕ್ ಮುಂಭಾಗದ ಈಹಿಂದಿನ ಪರಿಷತ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ಶಿಲಾನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಪುತ್ತಿಲ ಪರಿವಾರದ ಹೆಸರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಸಹಿತ ಅವರ ಬೆಂಗಲಿಗರು ಕಾರಿನಲ್ಲಿ ಆಗಮಿಸಿದ್ದರು.
0
Report
Dakshina Kannada575013blurImage

ನಾಪತ್ತೆಯಾಗಿದ್ದ ಉದ್ಯಮಿ ಶವವಾಗಿ ಪತ್ತೆ

ShamsheerShamsheerOct 08, 2024 07:18:12
Mangaluru, Karnataka:

ಕೂಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿಯ ಶವವನ್ನು ಸೋಮವಾರ ಕೂಳೂರು ಸೇತುವೆ ಬಳಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಕೋಸ್ಟ್ ಗಾರ್ಡ್ ತಂಡವು ಸ್ಥಳೀಯ ದೋಣಿ ಮೀನುಗಾರರ ತಂಡದೊಂದಿಗೆ ಪತ್ತೆ ಮಾಡಿದೆ. ಕೂಳೂರು ಸೇತುವೆ ಬಳಿ ಸ್ಥಳೀಯ ಮೀನುಗಾರರ ದೋಣಿಗೆ ಮೃತದೇಹ ಪತ್ತೆಯಾಗಿದೆ. ಉದ್ಯಮಿಗೆ ನಿರಂತರವಾಗಿ ಬೆದರಿಸಿ, ಬ್ಲಾಕ್ ಮೇಲ್ ಮಾಡಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿ ಲಕ್ಷಗಟ್ಟಲೆ ಹಣ ವಸೂಲಿ ಮಾಡಿರುವ ಮಹಿಳೆ ಸೇರಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Report
Dakshina Kannada574328blurImage

ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿ

ShamsheerShamsheerSept 30, 2024 05:42:37
Karnataka:
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಮ್ಮಾರ ಎಂಬಲ್ಲಿ ನಡೆದಿದೆ. ಈ ಅಪಘಾತದ ವಿಡಿಯೋ ಸಿಸಿಟಿವಿ ಸೆರೆಯಾಗಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಜೊತೆಗೂಡಿ ಮೇಲಕ್ಕೆತ್ತಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್‌ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ.
0
Report
Dakshina Kannada575013blurImage

ರಸ್ತೆ ಮಧ್ಯೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ShamsheerShamsheerSept 29, 2024 14:06:20
Mangaluru, Karnataka:
ರಸ್ತೆ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಇಂದು ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಈ ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ.
0
Report
Dakshina Kannada574231blurImage

ಮೆಲ್ಕಾರ್ ನಲ್ಲಿ ಬೆಂಕಿಯುಂಡೆಗಳ ಬೀಳುವ ದೃಶ್ಯ ವೈರಲ್!

ShamsheerShamsheerSept 28, 2024 08:12:05
Karnataka:
ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು – ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ನ ಮೇಲಿನಿಂದ ಸರ್ವೀಸ್ ರಸ್ತೆಗೆ ಬೆಂಕಿಯುಂಡೆಗಳು ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಅಜಾಗರೂಕತೆಯಿಂದ ಮಾಡುವ ಕಾಮಗಾರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿವೆ. ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಸ್ತೆಯ ಎರಡು ಸೈಡ್ ಗಳಿಗೆ ರಕ್ಷಣಾ ಬೇಲಿ ಅಂದರೆ ತಡೆ ಬೇಲಿಯನ್ನು ನಿರ್ಮಿಸಲು ಕಬ್ಬಿಣದ ರಾಡ್ ಗಳನ್ನು ವೆಲ್ಡಿಂಗ್ ಮಾಡಲಾಗುತ್ತಿದೆ.
0
Report
Dakshina Kannada574238blurImage

ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ನಿಖಿಲ್ ದಂಪತಿ ಭೇಟಿ ಪೂಜೆ

ShamsheerShamsheerSept 24, 2024 04:31:48
Subramanya, Karnataka:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ರಾಜ್ಯದಲ್ಲಿ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು. ಇದೇ ವೇಳೆ ನಿಖಿಲ್ ಅವರ ಪತ್ನಿ, ಮಗು ಹಾಜರಿದ್ದರು.
0
Report
Dakshina Kannada574216blurImage

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ShamsheerShamsheerSept 24, 2024 04:26:29
Dharmasthala, Karnataka:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೇ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು. ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.
0
Report
Dakshina Kannada574211blurImage

ಒಡ್ಡೂರು ಫಾರ್ಮ್ಸ್ ಗೆ ಶಂಕರಾಶ್ರಮ ಸ್ವಾಮೀಜಿ ಭೇಟಿ

ShamsheerShamsheerSept 23, 2024 10:41:28
Bantwal, Karnataka:
ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಚಿತ್ರಾಪುರ ಮಠದ ಶ್ರೀ ಶ್ರೀ ಶ್ರೀ ಸದ್ಯೋಜಾತ್ ಶಂಕರಾಶ್ರಮ ಸ್ವಾಮೀಜಿಯವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು. ಇದೇ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸ್ವಾಮೀಜಿಯವರಿಗೆ ಆತಿಥ್ಯ ನೀಡಿದರು.
0
Report
Dakshina Kannada575013blurImage

ವಿಧಾನ ಪರಿಷತ್ ಚುನಾವಣೆಯಲ್ಲಿ ನಿಯಮವನ್ನು ಪಾಲಿಸಿ: ಡಿಸಿ

ShamsheerShamsheerSept 21, 2024 14:09:19
Mangaluru, Karnataka:
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೆÇೀಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆ ಆಗಿರುವ ಎಲ್ಲಾ ನೀತಿ ಸಂಹಿತೆಗಳು ಈ ಚುನಾವಣೆಯಲ್ಲಿ ಅನ್ವಯವಾಗಲಿದೆ ಅಂದಿದ್ದಾರೆ.
0
Report
Dakshina Kannada574219blurImage

ಅಯ್ಯೋ ಈ ರಸ್ತೆಯ ಪಾಡು ಕೇಳೋರು ಯಾರಿಲ್ಲವೇ?

ShamsheerShamsheerSept 21, 2024 14:00:49
Mangalore, Karnataka:
ಅಮ್ಟೂರು- ಕರಿಂಗಾನ ಕ್ರಾಸ್ ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಅಮ್ಟೂರು ಕರಿಂಗಾನ ರಸ್ತೆ ಸುಮಾರು ಆರು ಕಿ.ಮೀ ಇದ್ದು, ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಹೊಂಡಗಳಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ರಸ್ತೆಯ ಇಕ್ಕೆಲಗಳ ಮಣ್ಣು ಮಳೆಗೆ ಕರಗಿ ಹೋಗಿದ್ದು, ದ್ವಿಚಕ್ರವಾಹನ ಸವಾರರು ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆಯಂತೆ. ಕರಿಂಗಾಣದಲ್ಲಿ ಶಾಲೆ,ಹಾಗೂ ಚರ್ಚ್ ಇದ್ದು, ಗ್ರಾಮೀಣ ಭಾಗದ ಅನೇಕರು ಇದೇ ರಸ್ತೆಯನ್ನು ಆಶ್ರಯಿಸಿಕೊಂಡಿದ್ದಲ್ಲದೆ, ಹೆದ್ದಾರಿ ಸಂಪರ್ಕದ ಪ್ರಮುಖ ಕೊಂಡಿಯಾಗಿ ಈ ರಸ್ತೆ ಪಾತ್ರವಹಿಸುತ್ತದೆ.
0
Report
Dakshina Kannada574150blurImage

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ

ShamsheerShamsheerSept 21, 2024 13:54:30
Kinnigoli, Karnataka:
ಪಿಡಬ್ಲ್ಯುಡಿ ಕ್ಲಾಸ್-1 ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಮತ್ತು ಜೂನಿಯರ್ ಇಂಜಿನಿಯರ್ ನಾಗರಾಜ್ ಎಂದು ಗುರುತಿಸಲಾಗಿದೆ.
0
Report
Dakshina Kannada574214blurImage

ರಸ್ತೆ ಅವ್ಯವಸ್ಥೆ: ಎಸ್ ಡಿಪಿಐ ಪ್ರತಿಭಟನೆ

ShamsheerShamsheerSept 13, 2024 03:46:11
Belthangady, Karnataka:
ಮಂದಗತಿಯಿಂದ ಸಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಎಸ್.ಡಿ.ಪಿ‌.ಐ ಪಕ್ಷದ ವತಿಯಿಂದ ಇಂದು ಬಿಸಿರೋಡ್ ಹಾಗೂ ಬೆಳ್ತಂಗಡಿಯ ಮೂರುಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು. ಕ್ಷೇತ್ರ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೇ ಕಳೆದ್ರೂ ಇನ್ನು ಕಾಮಗಾರಿ ಪೂರ್ಣಗೊಳ್ಳದೆ ದಿನ ನಿತ್ಯ ಅಫಘಾತಗಳು ಸಂಭವಿಸುತ್ತಿವೆ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ ಎಂದರು.
0
Report
Dakshina Kannada575013blurImage

ಮಂಗಳೂರಲ್ಲಿ ಎಸ್ ಡಿಪಿಐ ಪಕ್ಷದ ಪ್ರತಿಭಟನೆ

ShamsheerShamsheerSept 13, 2024 03:42:39
Mangaluru, Karnataka:
ನೂತನ ವಕ್ಫ್ ತಿದ್ದುಪಡಿ ಮಸೂದೆ ಜಾರಿಯನ್ನು ಖಂಡಿಸಿ ಮಂಗಳೂರಿನ ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಇದೇ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
0
Report
Dakshina Kannada574201blurImage

ಹಿಂದೂ ಮುಖಂಡನ ವಿರುದ್ಧದ ಕೇಸ್ ಗೆ ಕೋರ್ಟ್ ತದೇ

ShamsheerShamsheerSept 13, 2024 03:38:49
Puttur, Karnataka:

ಬಿಜೆಪಿ ಮುಖಂಡ ಅರುಣ್ ಕುಮಾರ್ ವಿರುದ್ಧದ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅರುಣ್ ಕುಮಾರ್ ಪುತ್ತಿಲ ಪ್ರಾರ್ಥನೆ ಸಲ್ಲಿಸಿದರು. ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲ ಪ್ರಕರಣಗಳಲ್ಲೂ ನನ್ನನ್ನು ಸಿಲುಕಿಸುವ ಪ್ರಯತ್ನಗಳು ನಡೆದಿದ್ದವು. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯಾ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ ನನ್ನ ವಿರುದ್ಧ ಷಡ್ಯಂತ್ರಗಳು ನಡೆದಿವೆ. ಅವರು ನನ್ನನ್ನು ರಾಜಕೀಯವಾಗಿ ತೊಲಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

0
Report
Dakshina Kannada574150blurImage

ರಿಕ್ಷಾವನ್ನು ಮೇಲಕ್ಕೆತ್ತಿ ಅಮ್ಮನ ಜೀವ ಕಾಪಾಡಿದ ಬಾಲಕಿ

ShamsheerShamsheerSept 09, 2024 05:03:28
Mangaluru, Karnataka:
ಕಿನ್ನಿಗೋಳಿಯ ರಾಮನಗರದಲ್ಲಿ ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ರಿಕ್ಷಾ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಇದೇ ವೇಳೆ ಅಲ್ಲಿದ್ದ ಬಾಲಕಿ ತನ್ನ ತಾಯಿಯ ಮೇಲೆ ಬಿದ್ದಂತಹ ರಿಕ್ಷಾವನ್ನೇ ಎತ್ತಿ ಜೀವ ಕಾಪಾಡಿದ್ದಾಳೆ. ಇಂದು ಸಿಸಿಟಿವಿ ದೃಶ್ಯ ವೈರಲಾಗಿದೆ. ಟ್ಯೂಶನ್ ಗೆ ತೆರಳಿದ್ದ ಮಗಳನ್ನು ಕರೆತರಲು ಸೆಂಟರ್ ಬಳಿ ಬಂದ ಮಹಿಳೆ ಏಕಾಏಕಿ ರಸ್ತೆ ದಾಟಲು ಹೋದಾಗ ಅದೇ ರಸ್ತೆಯಲ್ಲಿ ಬಂದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಕೂಡ್ಲೇ ಬಾಲಕಿ ಆಟೋ ಎತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.
0
Report
Dakshina Kannada574219blurImage

ಭೀಕರ ಅಪಘಾತ: ನವವಿವಾಹಿತೆ ಸಾವು

ShamsheerShamsheerSept 07, 2024 16:27:58
Mangalore, Karnataka:
ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಪೆರ್ನೆ ಸಮೀಪದ ಅನಿಶ್ ಕೃಷ್ಣ ಎಂಬುವವರ ಪತ್ನಿ ಮಾನಸ ಸಾವನ್ನಪ್ಪಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವ ದಂಪತಿ ಇದ್ದ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
0
Report