Back

ರಾಜ್ಯದಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ:ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ವಿಶ್ವಾಸ
Bagalkote, Karnataka:
ಬರುವ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಲಾಗಿದೆ ಎಂದು ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್. ಎಸ್. ಮಂಜುನಾಥ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ನಂತರ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ, ಉಮ್ಮಸ್ಸು ಕಂಡುಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಐದು ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಯುವ ಕಾಂಗ್ರೆಸ್ ಮುಂದಾಗಬೇಕು. ಮುಂದಿನ ಚುನಾವಣೆಗೂ ಸಜ್ಜಾಗಬೇಕು ಎಂದರು.
ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಸೂಚನೆಯಂತೆ ಈಗಿನಿಂದಲೇ ಸಂಘಟನೆ ಸದೃಢಗೊಳಿಸಿ 2028ರ ಚುನಾವಣೆಗೆ ಬಿರುಸಿನ ತಯಾರಿ ನಡೆಯುತ್ತಿದೆ ಎಂದ ಅವರು, “ಜಮಖಂಡಿಯಲ್ಲಿ ನಮಗೆ ನೀಡಿದ ಅದ್ಭುತ ಸ್ವಾಗತದಿಂದ ಈ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಎಷ್ಟು ಬಲಿಷ್ಠವಾಗಿದೆ ಎಂಬುದು ಸಾಬೀತಾಗಿದೆ” ಎಂದು ಹೇಳಿದರು.
0
Report
ಬಾಗಲಕೋಟೆ ನಗರದಲ್ಲಿ ಯಶಸ್ವಿಯಾಗಿ ಜರುಗಿದ ಯುವ ಕಾಂಗ್ರೆಸ್ ಜಿಲ್ಲಾ ಸಮೀತಿಯ ಕಾರ್ಯಕಾರಿಣಿ ಸಭೆ
Bagalkote, Karnataka:
ಬಾಗಲಕೋಟೆ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ಬಾಗಲಕೋಟ ವತಿಯಿಂದ ಬಾಗಲಕೋಟೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥಗೌಡ ಅವರ ಅಧ್ಯಕ್ಷತೆಯಲ್ಲಿ ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಜಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ತಿಮ್ಮಾಪುರ್ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯಕಾರಿಣಿ ಸಭೆ ಜರುಗಿತು. ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿಗಳಾದ ಅಬ್ದುಲ್ ದೇಸಾಯಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ , ಉಪಾಧ್ಯಕ್ಷರಾದ ಮಂಜುನಾಥ್ ಮುಚಖಂಡಿ, ಬಾಗಲಕೋಟೆ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ನಂಜಯ್ಯನಮಠ, ಜಿಲ್ಲಾ ಎಸ್ ಸಿ ಬ್ಲಾಕ್ ಅಧ್ಯಕ್ಷ ರಾಜು ಮನ್ನಿಕೆರಿ ರವರು, ಸೇರಿ ಎಲ್ಲಾ ಜಿಲ್ಲಾ, ತಾಲೂಕ, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸಿದರು.
0
Report
ಜೂನ.19. ರಂದು ಬಾಗಲಕೋಟೆ ಜಿಲ್ಲಾಡಳಿತಭವನದ ಮುಂದೆ ಕಬ್ನು ಬೆಳೆಗಾರರ ಪ್ರತಿಭಟನೆ
Bagalkote, Karnataka:
ಜೂನ್.19.ರಂದು ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಬಿಲ್ ಪಾವತಿಸಲು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.ಜಮಖಂಡಿ ನಗರದಲ್ಲಿ ನಡೆದ ಕಬ್ಬು ಬೆಳೆಗಾರರ ಸಂಘದ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ಜೂನ್.19 ಪ್ರಸಕ್ತ ಸಾಲಿನ ಕಬ್ಬಿನ ಬಾಕಿ ಪಾತಿಗೆ ಆಗ್ರಹಿಸಿ ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ರೈತ ಮುಖಂಡ ಈರಪ್ಪ ಹಂಚಿನಾಳ ತಿಳಿಸಿದ್ದಾರೆ.
0
Report
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಜೆ.ಟಿ.ಪಾಟೀಲ್
Bagalkote, Karnataka:
ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಮತಕ್ಷೇತ್ರದ ಬಂದಕೇರಿ ಗ್ರಾಮದ ಪರಿಶಿಷ್ಠ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಕಾರಿ ಹಾಗೂ ಯಂಡಿಗೇರಿ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಮತ್ತು ಅನವಾಲ ಗ್ರಾಮದ ಶ್ರೀ.ಸಿದ್ದೇಶ್ವರ ದೇವಸ್ಥಾನ ಅಭಿವೃದ್ದಿಪಡಿಸುವ ಕಾಮಗಾರಿಗಳಿಗೆ ಶಾಸಕ ಜೆ.ಟಿ.ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು.
0
Report
Advertisement
ಬಾದಾಮಿಯ ಶಿವಯೋಗ ಮಂದಿರದ ಹಿಂಭಾಗದ ಮಲಪ್ರಭ ಸೇತುವೆ ಮುಳುಗಡೆ
Bagalkote, Karnataka:
ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುವ ಮಲಪ್ರಭ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ.ಪರಿಣಾಮ ಬಾದಾಮಿ ತಾಲೂಕಿನ ಶಿವಯೋಗ ಮಂದಿರದ ಹಿಂಭಾಗದಲ್ಲಿನ ಸೇತುವೆ ಮುಳುಗಡೆ ಕಂಡಿದೆ.
ಬಾದಾಮಿ ತಾಲೂಕಿನ ಗೋನಾಳ,ಶಿರಬಡಿಗೆ,ಮಂಗಳೂರು, ಶಿವಯೋಗ ಮಂದಿರಕ್ಕೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತದೆ.ಸಧ್ಯ ರಸ್ತೆ ಸಂಚಾರ ಬಂದಾಗಿರುವುದರಿಂದ ಪಾದಾಚಾರಿಗಳು,ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
0
Report