Back
Dakshina Kannada574325blurImage

Mangalore - ಮಂಗಳೂರು ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಿರುದ್ಧ ಕಾನೂನು ಬಾಹಿರ ದಾಳಿ

Shamsheer
May 22, 2025 15:34:20
Budoli, Karnataka
ಮಂಗಳೂರು ನಗರದ ಹಲವೆಡೆ ಮಹಾನಗರಪಾಲಿಕೆಯ ಅಧಿಕಾರಿಗಳು ಗುರುವಾರ ಪೊಲೀಸ್ ಬಲ ಪ್ರಯೋಗಿಸಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ ಘೇರಾವ್ ಹಾಕಲಾಯ್ತು. ಈ ದಾಳಿ ಕಾನೂನು ಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ನಗರಪಾಲಿಕೆ ಅಧಿಕಾರಿಗಳು ಬೀದಿ ವ್ಯಾಪಾರದ ನಿಯಮ ಮತ್ತು ಕಾನೂನುಗಳನ್ನು ಪಾಲಿಸುತ್ತಿಲ್ಲ. ನಗರಪಾಲಿಕೆ ಆಡಳಿತ ವ್ಯವಸ್ಥೆ ಯಲ್ಲಿ ಜನರ ಪ್ರತಿನಿಧಿಗಳು ಇಲ್ಲ, ನಗರಪಾಲಿಕೆಯ ವ್ಯಾಪ್ತಿಯಲ್ಲಿ ಪಟ್ಟಣ ವ್ಯಾಪಾರ ಸಮಿತಿ ಅಸ್ತಿತ್ವದಲ್ಲಿಲ್ಲ. ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಕುಂದುಕೊರತೆ ನಿವಾರಣಾ ಸಮಿತಿಯು ಇಲ್ಲ,, ಮೇಲ್ಮನವಿ ಪ್ರಾಧಿಕಾರವೂ ಅಸ್ತಿತ್ವದಲ್ಲಿ ಇಲ್ಲದಿರುವಾಗ ಕಾರ್ಯಾಚರಣೆ ನಡೆಸಿರುವುದು ಅಧಿಕಾರಿಗಳ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಸಿಐಟಿಯು ಟೀಕಿಸಿದೆ.
0
Report

हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|