Back
Dakshina Kannada574325blurImage

Mangalore - ಮಂಗಳೂರು ವಿಮಾನ ದುರಂತ ಪ್ರಕರಣ: ಮಡಿದವರಿಗೆ ಶ್ರದ್ದಾಂಜಲಿ

Shamsheer
May 22, 2025 15:25:41
Budoli, Karnataka
15 ವರ್ಷಗಳ ಹಿಂದೆ ಅಂದ್ರೆ 2010ರ ಮೇ 22ರಂದು ನಡೆದ ಮಂಗಳೂರು ಭೀಕರ ವಿಮಾನ ದುರಂತಲ್ಲಿ ಜೀವ ಕಳೆದುಕೊಂಡವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಮಂಗಳೂರಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಜ್ಪೆ ವಿಮಾನ ದುರಂತದಲ್ಲಿ ಮಡಿದವರ ಸ್ಮರಣಾರ್ಥ ತಣ್ಣೀರುಬಾವಿ ಬಳಿ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ದ.ಕ. ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್‌, ಪಣಂಬೂರು ಎಸಿಪಿ ಕೆ.ಶ್ರೀಕಾಂತ್‌, ತಹಶೀಲ್ದಾರ್ ನವೀನ್ ಕುಮಾ‌ರ್ ಉಪಸ್ಥಿತರಿದ್ದು, ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
0
Report

हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|