Back
Dakshina Kannada575001blurImage

Manglore: ಪೆಟ್ರೋಲ್ ತುಂಬಿಸಿ ಎಸ್ಕೇಪ್ ಆದ ಕಾರು ಅಪಘಾತ

Shamsheer
May 21, 2025 11:50:45
Mangaluru, Karnataka
ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ.ಆಲ್ಟೋ ಕಾರೊಂದರಲ್ಲಿದ್ದ ಇಬ್ಬರು ಯುವಕರು ಬಿ.ಸಿ.ರೋಡಿನ ಪೆಟ್ರೋಲ್ ಬಂಕ್ ವೊಂದರಲ್ಲಿ ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದಾರೆ. ಅಲ್ಲಿಂದ ಸಾಲೆತ್ತೂರು ಮಾರ್ಗವಾಗಿ ತೆರಳಿದ ಈ ಕಾರು ಪಾಲ್ತಾಜೆ ಎಂಬಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
0
Report

हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|