Back
Bagalkot587103blurImage

Bagalkote - ನಿಗದಿತ ಅವಧಿಯಲ್ಲಿ ಜನನ,ಮರಣ ದಾಖಲಿಸಿ, ನಗರದಲ್ಲಿ ಡಿಸಿ ಜಾನಕಿ ಕೆ.ಎಂ ಸೂಚನೆ

Somashekhar
May 16, 2025 12:32:55
Bagalkote, Karnataka
ಆಸ್ಪತ್ರೆಗಳಲ್ಲಿ ಸಂಭವಿಸಿದ ಜನನ, ಮರಣ ಮತ್ತು ನಿರ್ಜಿವ ಜನನ ಘಟನೆಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಜೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಗರಿಕ ನೋಂದಣಿ ಪದ್ದತಿಯನ್ನು ಉತ್ತಮ ಪಡಿಸುವ ಸಲುವಾಗಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇ-ಜನ್ಮ ತಂತ್ರಾಂಶದಲ್ಲಿ ಜನನ ಮತ್ತು ಮರಣ ನೋಂದಣಿಯನ್ನು 21 ದಿನಗಳ ಒಳಗಾಗಿ ನೋಂದಣಿ ಆಗಬೇಕು. ನೋಂದಣಿಯಾಗದೇ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ಉಪ ನೋಂದಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಸೂಚಿಸಿದರು. ನೋಂದಣಿಗೆ ಪ್ರಕ್ರಿಯೆಗೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಗಳ ಸಹಕಾರ ಪಡೆದುಕೊಂಡು ನೊಂದಣಿ ಪ್ರಕ್ರಿಯೆ ಶೇ.100 ರಷ್ಟು ಆಗಬೇಕು ಎಂದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com