Back
Chamarajanagar571313blurImage

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಮೆರವಣಿಗೆ

Chn
Aug 27, 2024 14:36:36
Chamarajanagar, Karnataka

ಚಾಮರಾಜನಗರದಲ್ಲಿ ಮಂಗಳವಾರ ಮಧ್ಯಾಹ್ನ ಹಡಪದ ಅಪ್ಪಣ್ಣ ಜಯಂತಿ ಆಚರಣೆಯ ಅಂಗವಾಗಿ ಮೆರವಣಿಗೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಈ ಮೆರವಣಿಗೆಯು ಪ್ರವಾಸಿ ಮಂದಿರದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ಗೊರವರ ಕುಣಿತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸವಿತಾ ಸಮಾಜದ ಮುಖಂಡರು ಭಾಗವಹಿಸಿದ್ದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com