ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ.
Gundlupete, Karnataka:ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕಿನ ಶಿಂದನಪುರ ಮಾರ್ಗವಾಗಿ ಸಂಚರಿಸುವ ಎಲ್ಲ ಬಸ್ ಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಶಿಂದನಪುರ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕಳೆದ ಆರು ತಿಂಗಳಿಂದ ಶಿಂದನಪುರ ಗ್ರಾಮದ ಬಳಿ ಬಸ್‌ಗಳು ಸರಿಯಾಗಿ ನಿಲ್ಲುತ್ತಿಲ್ಲ ಎಂದು ಗುಂಡ್ಲುಪೇಟೆ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಹಲವು ಬಾರಿ ಲಿಖಿತವಾಗಿ ದೂರು ನೀಡಿದರೂ ಇಂದಿಗೂ ಬಸ್‌ಗಳು ನಿಲುಗಡೆಯಾಗುತ್ತಿಲ್ಲ ಇದರಿಂದ ಪ್ರತಿನಿತ್ಯ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ನಗರಕ್ಕೆ ಹೋಗುವ ಜನರು ತೊಂದರೆ ಅನುಭವಿಸುತ್ತಿದ್ದಾರೆ.
हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|
