Back
574220
ಬಿಜೆಪಿ ಮುಖಂಡನಿಗೆ ಸಂಘಪರಿವಾರದ ನಾಯಕರಿಂದ ತಡೆ
Puttur, Karnataka
ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಆಕ್ಷೇಪಿಸಿ ತಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರಿನ ಬ್ಯಾಂಕ್ ಮುಂಭಾಗದ ಈಹಿಂದಿನ ಪರಿಷತ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ಶಿಲಾನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಪುತ್ತಿಲ ಪರಿವಾರದ ಹೆಸರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಸಹಿತ ಅವರ ಬೆಂಗಲಿಗರು ಕಾರಿನಲ್ಲಿ ಆಗಮಿಸಿದ್ದರು.
0
Share
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Mangaluru, Karnataka:
ಅಂಕಪಟ್ಟಿಯ ಸಮಸ್ಯೆ,ಅವೈಜ್ಞಾನಿಕವಾಗಿ ಪರೀಕ್ಷಾ ಶುಲ್ಕ ಹೆಚ್ಚಳ ಹಾಗೂ ವಿವಿಯ ಹಲವಾರು ಸಮಸ್ಯೆಗಳ ವಿರುದ್ಧ ಎಬಿವಿಪಿ ಮಂಗಳೂರು ವಿಭಾಗದ ವತಿಯಿಂದ ವಿದ್ಯಾರ್ಥಿಗಳು ಇಂದು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರದಂದು ಬೆಳಿಗ್ಗೆಯೇ ವಿವಿಯ ಕ್ಯಾಂಪಸ್ ನಲ್ಲಿ ಸೇರಿದ್ದ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಬಳಿಕ ವಿಶ್ವವಿದ್ಯಾಲಯದ ಆಡಳಿತ ಸೌಧದ ಕಡೆಗೆ ಸಾಗಿ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ
0
Share
Report
Mangaluru, Karnataka:
ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2.40 ಲಕ್ಷ ಕೊಟ್ಟು ಇವತ್ತಷ್ಟೆ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ. ಅಗ್ನಿಶಾಮಕದಳ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
0
Share
Report
Moodushedde, Karnataka:
ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದು ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದವು. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0
Share
Report
Mangaluru, Karnataka:
ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ ಸುರತ್ಕಲ್ ಸಮೀಪದಲ್ಲಿರುವ
ಮಂಗಳಪೇಟೆಯಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಶಾಖೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರಕಾರದ ಆದೇಶ ಮೀರಿ ಶಾಲಾ ಆವರಣದಲ್ಲಿ ಸಂಘದ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು
ಈ ಬಗ್ಗೆ ಶಾಲೆಯಿಂದ ಗ್ರಾಮ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದೆ.
0
Share
Report
Mangaluru, Karnataka:
ಹೆಚ್ಚು ಜಿಎಸ್ ಟಿ ಸಂಗ್ರಹಿಸುವ ರಾಜ್ಯ ಕರ್ನಾಟಕವಾಗಿದ್ದರೂ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿ ರಾಜ್ಯೋತ್ಸವ ಸಂದೇಶ ನೀಡಿದರು.
0
Share
Report
Mangaluru, Karnataka:
ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಈ ಬಗ್ಗೆ ಜನಜಾಗೃತಿಯಾಗಬೇಕಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಜಾನ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿ ಭಾಷೆ ಮೇಲೆ ನಮಗೆ ಅಭಿಮಾನವಿದೆ. ಆದರೆ ಅದರ ಹೇರಿಕೆ ಸರಿಯಲ್ಲ. ಭಾಷಾವಾರು ಏಕೀಕರಣದ ವೇಳೆ ತಮಿಳುನಾಡಿನಲ್ಲಿ ತಮಿಳರು, ಆಂಧ್ರದಲ್ಲಿ ತೆಲುಗಿನವರು ಒಂದಾದರು ಎಂದರು.
0
Share
Report
Tankaulipady, Karnataka:
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಉಳಿಪ್ಪಾಡಿಗುತ್ತಿನಿಂದ ಧರ್ಮ ದೈವ ಶ್ರೀ ಕೊಡಮಣಿತ್ತಾಯನ ಭಂಡಾರ ಆಗಮಿಸಿ ಶ್ರೀ ದೇವರಿಗೆ ರಂಗಪೂಜೆ ಮತ್ತು ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ವತಿಯಿಂದ ತುಪ್ಪದ ದೀಪೋತ್ಸವ ಆಚರಣೆ ನಡೆಯಿತು.
0
Share
Report
Mangaluru, Karnataka:
ಜಾತಿ ಗಣತಿಯನ್ನು ಜಾರಿ ಮಾಡಬೇಕೆಂದು ಪ್ರಸ್ತಾಪವನ್ನಿಟ್ಟ ಹಿಂದುಳಿದ ವರ್ಗದ ನಾಯಕ ಬಿ.ಕೆ. ಹರಿಪ್ರಸಾದ್ ಬಗ್ಗೆ ತುಚ್ಛವಾಗಿ ಮಾತನಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಹರಿಪ್ರಸಾದ್ ಹಾಗೂ ಅವರ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಆಗ್ರಹಿಸಿದ್ದಾರೆ. ಅವರು ಮಂಗಳೂರು
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜಾ ಅವರು ಬಿ.ಕೆ. ಹರಿಪ್ರಸಾದ್ ಅವರ ಡಿಎನ್ಎ ಪರೀಕ್ಷೆ ಮಾಡಬೇಕೆಂದು ಕೀಳುಮಟ್ಟದ ರಾಜಕೀಯ ಹೇಳಿಕೆ ನೀಡಿರುವುದು ಖಂಡನೀಯ ಅಂದಿದ್ದಾರೆ.
0
Share
Report
Mangaluru, Karnataka:
ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆಯು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಯ್ತು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡಿತಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ಇದ್ದಾರೆ.
0
Share
Report
Puttur, Karnataka:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭಾಗಿಯಾಗಿ ಅಚ್ವರಿ ಮೂಡಿಸಿದ್ರು.
ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು.
0
Share
Report