Back
Dakshina Kannada574199blurImage

Mangalore - ಕೊಲೆ ಯತ್ನ ಕೇಸ್: ಪಾಣೆಮಂಗಳೂರು ಸಮೀಪ ಜಿಲ್ಲಾ ಎಸ್ಪಿ ಸ್ಥಳಕ್ಕೆ ಭೇಟಿ, ಪರಿಶೀಲನೆ

Shamsheer
May 17, 2025 12:26:29
Karnataka
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ‌ ಹಿಂದೆ ಗಲಾಟೆಗಳು ನಡೆದಿದೆ. ಅದರ ಮುಂದುವರಿದ ಭಾಗವಾಗಿ ಕೊಲೆ ಯತ್ನ ನಡೆದಿದೆಯಾ? ಎಂಬ ಸಂಶಯ ಪೊಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com