Back
Dakshina Kannada574325blurImage

Mangalore - ದಕ್ಷಿಣ ಕನ್ನಡದಲ್ಲಿ ಜೂನ್ 1 ರಿಂದ ಮೀನುಗಾರಿಕೆ ನಿಷೇಧ

Shamsheer
May 22, 2025 15:37:38
Budoli, Karnataka
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು  ಜೂನ್  1 ರಿಂದ  ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿμÉೀಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.    ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com