Back
Dakshina Kannada574325blurImage

Mangalore - ಬಂಟ್ವಾಳದಲ್ಲಿ ಚಿನ್ನದ ಕಳವು: ಆರೋಪಿ ಬಂಧನ

Shamsheer
May 22, 2025 15:38:44
Budoli, Karnataka
ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಪೋಲಿಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತುಂಬೆ ನಿವಾಸಿ ಹಸನ್ ಬಾವ ಎಂಬಾತ ಬಂಧಿತ ಆರೋಪಿ. ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿ‌ ರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವಾಗಿತ್ತು.‌‌ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com