Back
Dakshina Kannada575001blurImage

Mangalore: ಯುವಕನಿಗೆ ಚೂರಿ ಇರಿತ: ತನಿಖೆ ಚುರುಕು

Shamsheer
May 17, 2025 08:07:34
Mangaluru, Karnataka

ಯುವಕನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ತಿಳಿದುಬಂದಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com