Back
Dakshina Kannada575001blurImage

Mangaluru - ಐರಾವತ ಬಸ್ಸು ದ್ವಿಚಕ್ರಕ್ಕೆ ಢಿಕ್ಕಿ: 24 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

Shamsheer
May 19, 2025 14:19:47
Mangaluru, Karnataka
ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು - ನೆಹರೂ ನಗರದಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.ಆಲಿಸ್ಟಾರ್ ಡಿಸೋಜ (24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪಾಣೆಮಂಗಳೂರು - ನೆಹರೂ ನಗರದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಎದುರಿದ್ದ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com