Back
Dakshina Kannada575013blurImage

Mangaluru - ಮಂಗಳೂರಲ್ಲಿ ಸರ್ವೇ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ

Shamsheer
May 15, 2025 07:10:38
Mangaluru, Karnataka
ಮಂಗಳೂರು ನಗರದಲ್ಲಿ ಸರ್ವೇ ಮೇಲ್ವಿಚಾರಕರೊಬ್ಬರ ಮನೆ, ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ತುಮಕೂರು ಮೂಲದವರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com