Back
Dakshina Kannada575001blurImage

ನದಿ ಮಾಲಿನ್ಯ - ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Shamsheer
Jun 04, 2025 13:20:56
Mangaluru, Karnataka
ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು. ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನದಿ ಮಾಲಿನ್ಯದಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸಚಿವರಿಗೆ ತಿಳಿಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com