Back
Dakshina Kannada575002blurImage

ಎಂಎಲ್ ಸಿ ಐವನ್ ಡಿಸೋಜಾರ ಮನೆಗೆ ‌ಕಲ್ಲು ತೂರಾಟ

Shamsheer
Aug 22, 2024 04:21:35
Mangaluru, Karnataka
ಎಂಎಲ್ ಸಿ ಐವನ್ ಡಿಸೋಜಾರ ಮಂಗಳೂರಿನ ಕಂಕನಾಡಿ ವೆಲೆನ್ಸಿಯಾದಲ್ಲಿರೋ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾತ್ರಿ ಈ ಘಟನೆ ನಡೆದಿದ್ದು ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿ ಇರಲಿಲ್ಲ. ಬೆಂಗಳೂರಲ್ಲಿ ಪಕ್ಷದ ಮೀಟಿಂಗ್ ಗೆ ಹೋಗಿದ್ದರು. ಸುಮಾರು 5 ರಿಂದ ಆರು ಜನರ ತಂಡ ರಾತ್ರಿ 11 ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com