Back
Dharwad580020blurImage

ಪರಿಶಿಷ್ಟರಿಗೆ ರಕ್ಷಣೆ ಒದಗಿಸಲು ಆಗ್ರಹ

Kallappa Mandyal, Hubballi
Aug 22, 2024 04:09:05
Hubballi, Karnataka

ಕರ್ನಾಟಕ ದಲಿತ ಮುಕ್ತಿ ಸಮಿತಿ ವತಿಯಿಂದ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ತಡೆಗೆ ಹಾಗೂ ಭದ್ರತೆ ಒದಗಿಸುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ''ಇತ್ತೀಚೆಗೆ ಪರಿಶಿಷ್ಟ ಜಾತಿಗಳ ಮೇಲೆ ಶೋಷಣೆ ಮತ್ತು ಅಸ್ಪೃಶ್ಯತೆ ಹೆಚ್ಚುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೇಗೂರ ಗ್ರಾಮದ ಪರಿಶಿಷ್ಟ ಜಾತಿಯ ವಿರೂಪಾಕ್ಷಪ್ಪ ಹರಿಜನ ಎಂಬಾತ ತನ್ನ ಅಜ್ಜಿಯ ಮನೆಗೆ ನುಗ್ಗಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯಮನೂರಪ್ಪ ಬಂಡಿಹಾಳ ಎಂಬುವರನ್ನು ಕೊಲೆ ಮಾಡಲಾಗಿದೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com